ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು;
ನವದೆಹಲಿ; ದೇಶದ ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ವೈವಾಹಿಕ ಸ್ಥಿತಿಯು ಅನಗತ್ಯ ಗರ್ಭಧಾರಣೆಯನ್ನು ಸ್ಥಗಿತಗೊಳಿಸುವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿವಾಹಿತ ಮತ್ತು ಅವಿವಾಹಿತ ಮಹಿಳೆಯರು ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಮಸೂದೆ ಮತ್ತು ನಿಯಮಗಳ ಅಡಿಯಲ್ಲಿ ಗರ್ಭಪಾತ ಮಾಡಿಸಬಹುದಾದ ಹಕ್ಕನ್ನು 24 ವಾರಗಳವರೆಗೂ ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಾಹಿತ ಮತ್ತು ಅವಿವಾಹಿತ ಮಹಿಳೆಯರ ನಡುವಿನ ತಾರತಮ್ಯವನ್ನು ತೊಡೆದುಹಾಕುವ ಉದ್ದೇಶದಿಂದ 24 ವಾರಗಳ ಗರ್ಭಪಾತಕ್ಕೆ ಅವಕಾಶ ನೀಡುವ ನಿಯಮಗಳಿಗೆ ಸಂಬಂಧಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ವಿವಾಹಿತ ಮತ್ತು ಅವಿವಾಹಿತ ಮಹಿಳೆಯರ ನಡುವಿನ ವ್ಯತ್ಯಾಸವು ಕೃತಕ ಮತ್ತು ಸಾಂವಿಧಾನಿಕವಾಗಿ ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.