CrimeNational

ಸ್ನೇಹಿತನ ಸೋದರಿ ಮುಂದೆ ಮದುವೆ ಪ್ರಸ್ತಾಪ; ಒಪ್ಪದಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಗೊಂಡಾ; ತನ್ನ ಸ್ನೇಹಿತನ ಸಹೋದರಿ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರಿಂದ ಬೇಸತ್ತ ಪಾಗಲ್‌ ಪ್ರೇಮಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಬಳಿ ನಡೆದಿದೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವನನ್ನು ಕಿಶೋರ್‌ ಎಂದು ಗುರುತಿಸಲಾಗಿದ್ದು, ತಡೆಯಲು

ಕಿಶೋರ್ ತನ್ನ ಸ್ನೇಹಿತನ ಸಹೋದರಿಗೆ ಮದುವೆ ಮಾಡಿಕೊಳ್ಳುತ್ತೇನೆ ಎಂದು ಪ್ರಸ್ತಾಪ ಇಟ್ಟಿದ್ದ. ಆದರೆ, ಈ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಕಿಶೋರ್ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಯುವತಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಈ ಸಮಯದಲ್ಲಿ ಅವರಿಗೂ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಿಶೋರ್‌ ಮೃತಪಟ್ಟಿದ್ದಾನೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

Share Post