BengaluruCrimePolitics

ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ; ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ ಇಡಿ ದಾಳಿ!

ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರೂಪಾಯಿ ಅವ್ಯಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಅಖಾಡಕ್ಕಿಳಿದಿದ್ದಾರೆ.. ಇಂದು ರಾಯಚೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರ ಮನೆಗಳ ಮೇಲೆ ಮುಂಜಾನೆಯೇ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆದಿದೆ.

ಇದನ್ನೂ ಓದಿ; ಏನಿದು ʻರಾಮನಗರʼ ಗುದ್ದಾಟ..?; ಹೆಸರು ಬದಲಿಸಿದರೆ ಅಭಿವೃದ್ಧಿ ಆಗುತ್ತಾ..?

ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.. ಇದರ ಜೊತೆಗೆ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ನಾಗೇಂದ್ರ ಫ್ಲ್ಯಾಟ್‌ನಲ್ಲೂ ಅಧಿಕಾರಿಗಳು ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ..

ಇದನ್ನೂ ಓದಿ; ತುಪ್ಪದ ಅಸಲೀತನದ ಪರೀಕ್ಷೆ ಮಾಡುವುದು ಹೇಗೆ..?

ಇನ್ನು ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರ ರಾಯಚೂರು ನಗರದ ಆಶಾಪುರ ರಸ್ತೆಯ ನಿವಾಸ ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.. ನಿನ್ನೆಯಷ್ಟೇ ಶಾಸಕ ಬಸನಗೌಡ ದದ್ದಲ್‌ ಅವರು ಐಟಿ ವಿಚಾರಣೆ ಎದುರಿಸಿದ್ದರು.. ಇದೀಗ ಇಡಿ ಅಧಿಕಾರಿಗಳು ಅಖಾಡಕ್ಕಿಳಿದಿದ್ದಾರೆ.. ಇಬ್ಬರಿಗೂ ಬಂಧನದ ಭೀತಿ ಇದೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; 30 ಲಕ್ಷ ರೂ. ಆಸೆಗೆ ಕಿಡ್ನಿ ದಾನ ಮಾಡಿದ ಆಟೋ ಚಾಲಕ!; ಪಂಗನಾಮ ಹಾಕಿದ ವಂಚಕರು!

Share Post