CrimeNational

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಎರಡು ಮನೆಗಳಿಗೆ ಬೆಂಕಿ!

ಇಂಫಾಲ; ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ನಿಲ್ಲೋ ಲಕ್ಷಣ ಕಾಣುತ್ತಿಲ್ಲ. ಕೆಲ ದಿನಗಳಿಂದ ತಣ್ಣಗಿದ್ದ ಪರಿಸ್ಥಿತಿ ಮತ್ತೆ ಭುಗಿಲೇಳುವ ಲಕ್ಷಣ ಕಾಣಿಸುತ್ತಿದೆ. ಯಾಕಂದ್ರೆ, ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವು ಸುತ್ತುಗಳ ಗುಂಡು ಹಾರಿಸಲಾಗಿದೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.  ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿ ಎಂಬಲ್ಲಿ ಕೆಲವರು ದಾಳಿ ಮಾಡಿದ್ದಾರೆ.  ಗುಂಡು ಹಾರಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದ್ರಿಂದಾಗಿ ಪರಿಸ್ಥಿತಿ ಉದ್ವಿಗ್ನವಾಗಿದೆ.

 

Share Post