CrimeNational

ಬಿರ್ಭೂಮ್‌ 8ಮಂದಿ ಹತ್ಯಾ ಕೇಸ್:‌ ಘಟನಾ ಸ್ಥಳಕ್ಕೆ ದೀದಿ ಭೇಟಿ, ಮೃತರ ಕುಟುಂಬಸ್ಥರಿಗೆ ಸಾಂತ್ವಾನ

ಪಶ್ಚಿಮ ಬಂಗಾಳ: ಮಂಗಳವಾರ ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಹಿಂಸಾಚಾರಚ ಮನೆ ಮಾಡಿತ್ತು. ದುಷ್ಕರ್ಮಿಗಳ ಕೃತ್ಯಕ್ಕೆ ಎಂಟು ಮಂದಿ ಅಮಾಯಕರು ಸಜೀವ ದಹನ ಆಗಿದ್ರು. ವಿಪಕ್ಷಗಳ ಟೀಕೆ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಿರ್ಭೂಮ್ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಬಂಧಿಕರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದ್ರು. ಘಟನೆ  ಬಗ್ಗೆ ಸಂಬಂಧಿಕರ ದೂರುಗಳನ್ನು ಸಹ ಆಲಿಸಿದ್ದಾರೆ. ಘಟನೆ ಬಗ್ಗೆ ಮೃತರ ಕುಟುಂಬಸ್ಥರು ಕಣ್ಣೀರು ಹಾಕುತ್ತಾ ತಮ್ಮ ನೋವನ್ನು ಹೊರಹಾಕಿದ್ದಾರೆ.

ಟಿಎಂಸಿ ಕಾರ್ಯಕರ್ತನ ಹತ್ಯೆ ಖಂಡಿಸಿ ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಆತನ ಅನುಯಾಯಿಗಳು ಮನೆಗಳಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಸಜೀವ ದಹನ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಲ್ಕತ್ತಾ ನ್ಯಾಯಾಲಯ ಸ್ವಯಂಪ್ರೇತವಾಗಿ ಸುಮೊಟೊ ವಿಚಾರಣೆಯನ್ನ ಕೈಗೆತ್ತಿಕೊಂಡು ವಿಚಾರಣೆ ನಡೆಸಿತ್ತು. ವಿಚಾರಣೆಗೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಹದಿನಾಲ್ಕು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಎಂದು ಕೋರ್ಟ್‌ಆದೇಶಿಸಿದೆ.

ಇಂದು ಮಧ್ಯಾಹ್ನ 2ಗಂಟೆಯೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೊಲ್ಕತ್ತಾ ಹೈಕೋರ್ಟ್‌ ಸೂಚನೆ ನೀಡಿದೆ. ದೆಹಲಿ ಎಫ್‌ಎಸ್‌ಎಲ್‌ ತಂಡ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಿ ಹಿಂಸಾಚಾರ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಹೈಕೋರ್ಟ್‌ ಆದೇಶ ಮಾಡಿತ್ತು.

Share Post