BengaluruCrime

ಖರ್ಗೆ ಕುಟುಂಬಕ್ಕೂ ಕಂಟಕವಾಗ್ತಾರಾ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌?

ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಸದಸ್ಯರಿರುವ ಟ್ರಸ್ಟ್‌ಗೆ ಕೆಐಎಡಿಬಿಯಿಂದ ನಿವೇಶನ ಹಂಚಿಕೆಯಾಗಿರುವ ಆರೋಪ ಕಾನೂನು ಸಂಕಷ್ಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.. ರಾಜ್ಯಪಾರ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಈ ಪ್ರಕರಣ ಸಂಬಂಧ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.. ಹೀಗಾಗಿ ಖರ್ಗೆ ಹಾಗೂ ಅವರ ಕುಟುಂಬಕ್ಕೆ ಸಿದ್ದರಾಮಯ್ಯರಂತೆ ಕಾನೂನು ಸಂಕಷ್ಟ ಎದುರಾಗುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗುತ್ತಿದೆ..
ತರಾತುರಿಯಲ್ಲಿ ಖರ್ಗೆ ಕುಟುಂಬಸ್ಥರಿರುವ ಟ್ರಸ್ಟ್‌ಗೆ ಸರ್ಕಾರಿ ನಿವೇಶನ ನೀಡಲಾಗಿದೆ ಎಂಬ ಆರೋಪ ಇದೆ.. ಈ ಸಂಬಂಧ ದೂರು ಬಂದಿದ್ದರಿಂದ ರಾಜ್ಯಪಾಲರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದಿದ್ದಾರೆ.. ಈಗಾಗಲೇ ಕಾನೂನು ತಜ್ಞರು ರಾಜ್ಯಪಾಲರಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.. ಅರ್ಜಿ ಸಲ್ಲಿಕೆಯಾದ ಎರಡೇ ದಿನದಲ್ಲಿ ಭೂಮಿ ಹಂಚಿಕೆ ಪ್ರಕ್ರಿಯೆ ನಡೆದಿರುವುದರಿಂದ ರಾಜ್ಯಪಾಲರು ಈ ಬಗ್ಗೆ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ..
ಮಲ್ಲಿಕಾರ್ಜುನ ಖರ್ಗೆ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ನಿಯಮ ಲೋಪ ಆಧರಿಸಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಸಾಧ್ಯತೆ ಇದೆ.

Share Post