CrimeDistricts

ಸಿಂದಗಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲೇ ಮಹಿಳೆಯ ಹತ್ಯೆ

ವಿಜಯಪುರ; ವಿಜಯಪುರ ಜಿಲ್ಲೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಡು ರಸ್ತೆಯಲ್ಲಿ ಮಹಿಳೆಯನ್ನು ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿದೆ.

ಸಿಂದಗಿ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ಈ ಕೃತ್ಯ ಎಸಗಲಾಗಿದೆ. 54 ವರ್ಷದ ಶಾಂತಾಬಾಯಿ ತಳವಾರ ಎಂಬುವವರೇ ಕೊಲೆಯಾದ ಮಹಿಳೆಯಾಗಿದ್ದಾರೆ. ಸ್ಥಳದಲ್ಲಿ ಬೈಕ್‌ ಒಂದು ಪತ್ತೆಯಾಗಿದೆ. ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಕೊಲೆ ಯಾಕೆ ನಡೆಯಿತು ಎಂಬುದರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

 

Share Post