CrimeNational

ಕೆಲಸ ಕೊಡಿಸೋದಾಗಿ ನಂಬಿಸಿ ಯುವತಿಯರ ಮೇಲೆ ಅತ್ಯಾಚಾರ!

ಮುಜಾಫರ್‌ಪುರ; ಬಿಹಾರದ ಮುಜಾಫರ್‌ಪುರದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ, ಯುವತಿಯರನ್ನು ಗೃಹಬಂಧನದಲ್ಲಿಟ್ಟು ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.. ತಿಂಗಳುಗಳ ಕಾಲ ಯುವತಿಯನ್ನು ಗೃಹಬಂಧನದಲ್ಲಿಟ್ಟು ಸುಮಾರು 9 ಮಂದಿ ಯುವಕರು ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.. ಈ ಸಂಬಂಧ ಯುವತಿಯರಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್‌ ಆಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ..

ಉದೋಗ ಏಜೆಂಟರೆಂದು ಹೇಳಿಕೊಂಡು ಜಾಹೀರಾತುಗಳನ್ನು ನೀಡಿ, ಕೆಲಸಕ್ಕೆ ಬೇಕಾಗಿದ್ದಾರೆ ಎಂದು ಹೇಳಿದ್ದರು.. ಕರೆ ಮಾಡಿದವರನ್ನು ಮುಜಾಫರ್‌ ಪುರಕ್ಕೆ ಬರುವಂತೆ ಹೇಳಿ ಕರೆಸಿಕೊಂಡಿದ್ದರು.. ಹಾಗೆ ಕೆಲಸ ಅರಸಿ ಬಂದ ಯುವತಿಯನ್ನು ಮನೆಯೊಂದರಲ್ಲಿ ಕೂಡಿ ಹಾಕಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದರು ಎಂದು ತಿಳಿದುಬಂದಿದೆ.. ಹಲವು ತಿಂಗಳುಗಳ ಕಾಲ ಯುವತಿಯರನ್ನು ಹಾಗೆ ಗೃಹ ಬಂಧನದಲ್ಲಿರಿಸಲಾಗಿತ್ತು ಎಂದು ಹೇಳಲಾಗಿದೆ..

ಈಗ ಪೊಲೀಸರು ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ..

 

Share Post