ಕಾರು ಪಲ್ಟಿಯಾಗಿ ಕಾಂಗ್ರೆಸ್ ಯುವ ಮುಖಂಡ ಸಾವು
ಧಾರವಾಡ; ಕಾರು ಪಲ್ಟಿಯಾಗಿ ಯುವ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷ ಸೇರಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಮ್ಮಿನಬಾವಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರಂತಕ್ಕೆ ಕಾರಣವಾಗಿದೆ.
ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯಶವಂತ ಸೋಮಶೇಖರ ಯಲಿಗಾರ ಮೃತಪಟ್ಟ ದುರ್ದೈವಿಗಳಲ್ಲಿ ಒಬ್ಬರು. ಮತ್ತೊಬ್ಬರು ಯಶವಂತ್ ಅವರ ಸ್ನೇಹಿತರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.