CrimePolitics

ಕೊನೆಗೂ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅರೆಸ್ಟ್

ರಾಂಚಿ (ಜಾರ್ಖಂಡ್​); ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್​ರನ್ನು ಇಡಿ ಅಧಿಕಾರಿಗಳು‌‌ ಬಂಧಿಸಿದ್ದಾರೆ. ಇಂದು ಅವರ ವಿಚಾರಣೆ ನಡೆಸಿದ ಬಳಿಕ, ಬಂಧಿಸಲಾಗಿದೆ.
ಬಂಧನದ ಹಿನ್ನೆಲೆಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೀಗಾಗಿ ಜಾರ್ಖಂಡ್ ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜಾರ್ಖಂಡ್ ಮುಂದಿನ ಮುಖ್ಯಮಂತ್ರಿಯಾಗಿ ಜೆಎಂಎಂನ ಹಿರಿಯ ನಾಯಕ ಚಂಪೈ ಸೊರೆನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Share Post