ಬೊಮ್ಮಾಯಿ, ಸೋಮಣ್ಣ ಸೋಲಿಸಲು ವಿಜಯೇಂದ್ರ ಷಡ್ಯಂತ್ರ; ಯತ್ನಾಳ್
ಬೆಳಗಾವಿ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಸೇರಿ ಹಲವು ಬಿಜೆಪಿ ನಾಯಕರನ್ನು ಸೋಲಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಷಡ್ಯಂತ್ರ ನಡೆಸಿದ್ದರು ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
2ಎ ಮೀಸಲಾತಿಗೆ ಆಗ್ರಹಿಸಿ ನಡೆಯಲಿರುವ ಪಂಚಮಸಾಲಿ ಪ್ರತಿಭಟನೆಗೂ ಮುನ್ನ ಸೋಮವಾರ ರಾತ್ರಿ ಬೆಳಗಾವಿಯ ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.