Districts

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವುದನ್ನು ಸರ್ಕಾರ ಸಹಿಸುವುದಿಲ್ಲ; ಸಚಿವ ಮಾಧುಸ್ವಾಮಿ

ಬೆಳಗಾವಿ: ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ಹಿಂದೂ ಸಂಘಟನೆಗಳವರು ನಿರ್ಬಂಧ ವಿಧಿಸುತ್ತಿರುವುದಕ್ಕೆ ಅಸಾಮಾಧಾನ ವ್ಯಕ್ತಪಡಿಸಿದರು. ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಕ್ರಮ ವಹಿಸಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಎಚ್ಚರಿಸಿದರು.

ಸ್ವಾತಂತ್ರ್ಯಾನಂತರ ಇಲ್ಲಿ ಉಳಿದವರೆಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ. ಅಂತಹ ಚಟುವಟಿಕೆಗಳಿಗೆ ಸರ್ಕಾರ ಹೆಚ್ಚು ಆದ್ಯತೆ ಕೊಡುವುದಿಲ್ಲ ಎಂದು ಮಾಧುಸ್ವಾಮಿ ಹೇಳಿದರು. ಧಾರವಾಡದಲ್ಲಿ ಮುಸ್ಲಿಮರ ಅಂಗಡಿ ಧ್ವಂಸಗೊಳಿಸಿದ ಘಟನೆ ಬಗ್ಗೆ ಪ್ರಕ್ರಿಯಿಸಿದ ಅವರು, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವವರು ಅಥವಾ ಗಲಾಟೆ ಮಾಡುತ್ತಿರುವವರ ಮೇಲೆ ಕ್ರಮ ಜರುಗಿಸುತ್ತೇವೆ. ಅವರು ಮಾಡುತ್ತಿರುವುದು ತಪ್ಪು ಎಂದರು.

Share Post