ಅಪಘಾತದಲ್ಲಿ ನಾಲ್ವರು ಮಕ್ಕಳ ಸಾವು ಪ್ರಕರಣ; ಪ್ರತಿಭಟನೆ
ರಾಮನಗರ: ಆಗಸ್ಟ್ 9 ರಂದು ನಡೆದಿದ್ದ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಂದು ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಗೊಲ್ಲರದೊಡ್ಡಿ ಗ್ರಾಮಸ್ಥರು ರಸ್ತೆ ಮಧ್ಯೆ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ವಾಹನಗಳ ವೇಗ ನಿಯಂತ್ರಣ ಹಾಗೂ ರಸ್ತೆಗೆ ಹಂಪ್ಸ್ ಹಾಕುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಆಗಸ್ಟ್ 9 ರಂದು ಟ್ಯೂಷನ್ ಮುಗಿಸಿ ಐವರು ಮಕ್ಕಳು ಮನೆಗೆ ಬರುತ್ತಿದ್ದರು. ಈ ವೇಳೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಅಪಘಾತ ನಡೆದ ದಿನ ಮೂವರು ಸಾವನ್ನಪ್ಪಿದ್ದರು. ಇವತ್ತು ಮತ್ತೊಬ್ಬ ಸಾವನ್ನಪ್ಪಿದ್ದಾನೆ.
ರಾಮನಗರ- ಮಾಗಡಿ ಮುಖ್ಯರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಟೈರ್ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.