ಕಿಡಿಗೇಡಿಗಳಿಂದ ಸಂತ ಆಂಟೋನಿ ವಿಗ್ರಹ ಹಾನಿ
ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ವಿಧೇಯಕ ಮಂಡನೆ ಬೆನ್ನಲ್ಲೇ ತಾಲೂಕಿನ ಸೂಸೆಪಾಳ್ಯ ಗ್ರಾಮದಲ್ಲಿ ಕಿಡಿಗೇಡಿಗಳು ಸಂತ ಆಂಟೋನಿ ವಿಗ್ರಹ ಹಾನಿಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಸೂಸೆಪಾಳ್ಯ ಗ್ರಾಮದಲ್ಲಿ ವಿಗ್ರಹಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿದ್ದಾರೆ ಎನ್ನಲಾಗ್ತಿದೆ. ಈ ವಿಗ್ರಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೂಸೆಪಾಳ್ಯ ಗ್ರಾಮದಲ್ಲಿ ಸುಮಾರು 80 ಕ್ರಿಶ್ಚಿಯನ್ ಕುಟುಂಬಗಳು ವಾಸಿಸುತ್ತಿದ್ದಾರೆ.ರಂಗಧಾಮಯ್ಯ ಕೆರೆ ಕಟ್ಟೆ ಮೇಲಿರುವ ಸೈಂಟ್ ಆಂಟೋನಿ ವಿಗ್ರಹಕ್ಕೆ ಹಾನಿ ಮಾಡಲಾಗಿದೆ ಎಂದು ಚರ್ಚ್ ಫಾದರ್ಟ್ ಸೈಂಟ್ ಆಂಟೋನಿ ಡ್ಯಾನಿಯಲ್ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.