Districts

ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿ

ಮಂಗಳೂರು: ನಿನ್ನೆ ರಾತ್ರಿ ಪುತ್ತೂರಿನ ಉಪ್ಪಿನಂಗಡಿ ಪೊಲೀಸ್‌ ಠಾಣೆ ಮುಂದೆ ಪಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ನಡೆದಿತ್ತು. ಈ ಬೆನ್ನಲ್ಲೆಯಲ್ಲಿ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಪ್ರತಿಭಟನೆ ನಡೆಸದಂತೆ ಸೆಕ್ಷನ್ 144 ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

Share Post