Districts

ಪ್ರತಿಮೆಗೆ ಅವಮಾನಿಸಿದವರು ಮಾನಸಿಕ ರೋಗಿಗಳು- ಆರಗ ಜ್ಞಾನೇಂದ್ರ

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಛತ್ರಪತಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿರುವುದು ಖಂಡನೀಯ. ಅಂಥವರನ್ನು ವಿರುದ್ಧ ಗೂಂಡಾ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಗಡಿಪಾರು ಮಾಡಲು ಚರ್ಚೆ ವಡೆಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಅನಗೋಳದ ಕನಕದಾಸ ಕಾಲೋನಿಯಲ್ಲಿ ಮರು ಪ್ರತಿಷ್ಠಾಪಿಸಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಇಂದು ಪೂಜೆ ಸಲ್ಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆ ವರ್ಷ. ಈ ವೇಳೆ ದೇಶಕ್ಕಾಗಿ ದುಡಿದ ಮಹನೀಯರನ್ನು ನೆನೆಯಬೇಕು. ಆದರೆ ಕೆಲವರು ಪ್ರತಿಮೆಗಳಿಗೆ ಅಪಮಾನ ಮಾಡಿದ್ದಾರೆ.ಹೀಗಾಗಿ ಅಂಥವರು ಮಾನಸಿಕ ರೋಗಿಗಳು. ಅವರೆಲ್ಲ ಚನ್ನಮ್ಮ ಹಾಗೂ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ವಂಶಕ್ಕೆ ಸೇರಿದವರು. ಅಂಥವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಹಿಂದೆ ಕೆಲ ಸಂಘ-ಸಂಸ್ಥೆಗಳ ಸಂಚು ಇರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ಕೈಗೊಂಡು ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು. ಗಡಿಭಾಗದಲ್ಲಿ ಕನ್ನಡಿಗರು- ಮರಾಠಿಗರು ಹಿತ ಕಾಪಾಡುವ ದೃಷ್ಠಿಯಿಂದ ಮಹಾರಾಷ್ಟ್ರದ ಗೃಹ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು.

 

Share Post