Districts

ಮತದಾನ ಬಹಿಷ್ಕರಿಸಿ ಗ್ರಾಮಸ್ಥರ ಪ್ರತಿಭಟನೆ

ಹೊಸಪೇಟೆ:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ೫೭ ಗ್ರಾಮ ಪಂಚಾಯಿತಿಗಳ ಸದಸ್ಯರ ಸ್ಥಾನಕ್ಕೆ ಇಂದು ಬಿರುಸಿನಿಂದ ಮತದಾನ ನಡೆಯುತ್ತಿದೆ. ಈ ವೇಳೆ ಆನಂತಶಯನಗುಡಿ ಚಪ್ಪರದಹಳ್ಳಿ ನಿವಾಸಿಗಳು ಏಳನೇ ವಾರ್ಡ್‌ ನಿಂದ ಎಂಟನೇ ವಾರ್ಡ್‌ಗೆ ಮತದಾರರನ್ನು ಸ್ಥಳಾಂತರಿಸಿದ್ದಾರೆ ಎಂದು ಆರೋಪಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಏಳನೇ ವಾರ್ಡ್‌ನಲ್ಲೇ ಮತದಾನ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬೇರೆ ಕಡೆ ಹೋಗುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಆದರೂ ಜಗ್ಗದ ಮತದಾರರು ಮತದಾನ ಬಹಿಷ್ಕರಿಸಿ ಎಂದು ಪಟ್ಟು ಹಿಡಿದಿದ್ದಾರೆ.

Share Post