CrimeDistricts

ಮುರುಘಾ ಮಠದ ಹಾಸ್ಟೆಲ್‌ ವಿದ್ಯಾರ್ಥಿನಿಯರ ಸ್ಥಳಾಂತರ

ಚಿತ್ರದುರ್ಗ; ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿರುವ ಕಾರಣ ಮಠದ ಆವರಣದಲ್ಲಿರುವ ವಿದ್ಯಾರ್ಥಿನಿಯರ ನಿಲಯದ ವಿದ್ಯಾರ್ಥಿನಿಯರೆಲ್ಲರನ್ನೂ ಇಂದು ಸಂಜೆ ಸರ್ಕಾರಿ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರ ಮಾಡಲಾಗಿದೆ.

ಎರಡು ದಿನಗಳಿಂದ ಮಠ ಹಾಗೂ ವಿದ್ಯಾರ್ಥಿನಿಲಯದಲ್ಲಿ ತನಿಖಾ ತಂಡ ಸ್ಥಳ ಮಹಜರು ನಡೆಸುತ್ತಿದೆ. ಇದರಿಂದಾಗಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಇಲಾಖೆ ವಾಹನದಲ್ಲಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳ ತಂಡ ಸ್ಥಳಾಂತರ ಮಾಡಿತು. ಪ್ರಕರಣದ ಸುದ್ದಿ ಹೊರ ಬೀಳುತ್ತಿದ್ದಂತೆ ಅನೇಕ ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿಲಯಕ್ಕೆ ಭೇಟಿ ನೀಡಿದ್ದ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷೆ ಜಯಶ್ರೀ ಬಳಿ ವಿದ್ಯಾರ್ಥಿ‌ನಿಯರು ಆತಂಕ ವ್ಯಕ್ತಪಡಿಸಿದ್ದರು.

Share Post