DistrictsLifestyle

ಯೋಗದಿಂದ ವಿಶ್ವಕ್ಕೆ ಶಾಂತಿ; ಪ್ರಧಾನಿ ಮೋದಿ

ಮೈಸೂರು: ದೇಶ ಮತ್ತು ವಿಶ್ವದ ಎಲ್ಲ ಸಹೃದಯರಿಗೂ 8ನೇ ವಿಶ್ವ ಯೋಗ ದಿನದ ಶುಭಾಶಯಗಳು. ಯೋಗದಿನದ ಪ್ರಯುಕ್ತ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ, ಅಧ್ಯಾತ್ಮ ಮತ್ತು ಯೋಗ ಸಾಧಕರ ನೆಲೆವೀಡು ಮೈಸೂರಿಗೆ ಪ್ರಣಾಮ ಮಾಡುತ್ತೇನೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತುಗಳನ್ನು ಶುರು ಮಾಡಿದರು.

ಮಾತುಭಾರತವು ಸದಾ ವಿಶ್ವದ ಒಳಿತು ಬಯಸುತ್ತೆ. ಈ ಬಾರಿಯ ವಿಶ್ವ ಯೋಗದಿನದ ಆಶಯವೂ ಇದಕ್ಕೆ ಪೂರಕವಾಗಿದೆ. ಮಾನವತೆಗೆ ಯೋಗ ಎನ್ನುವುದು ಈ ವರ್ಷದ ಆಶಯ. ನಮ್ಮ ಋಷಿಮುನಿಗಳು ‘ಯೋಗದಿಂದ ವಿಶ್ವಕ್ಕೆ ಶಾಂತಿ’ ಎಂದು ಪ್ರತಿಪಾದಿಸಿದ್ದರು. ಯೋಗದಿಂದ ಸಮಾಜಕ್ಕೆ, ದೇಶಕ್ಕೆ ಅಷ್ಟೇ ಅಲ್ಲ ವಿಶ್ವಕ್ಕೆ ಶಾಂತಿ ದೊರೆಯುತ್ತದೆ. ಇದನ್ನು ಕೆಲವರು ವಿಪರೀತದ ಚಿಂತನೆ ಎಂದುಕೊಳ್ಳಬಹುದು. ಆದರೆ ಭಾರತೀಯರಿಗೆ ಇದು ಹೊಸದಲ್ಲ. ಪಿಂಡದಲ್ಲಿರುವುದು ಬ್ರಹ್ಮಾಂಡದಲ್ಲಿದೆ ಎನ್ನುವುದು ಭಾರತೀಯರ ಚಿಂತನೆ. ನಾವು ಬದಲಾಗಲು ಆರಂಭಿಸಿದರೆ ಜಗತ್ತು ಬದಲಾಗುವುದು ಆರಂಭಿಸುತ್ತದೆ ಎಂದು ಹೇಳಿದರು.

ಮೋದಿಯೋಗವು ಜಗತ್ತಿನ ಹಲವು ಸಮಸ್ಯೆಗಳಿಗೆ ಉತ್ತಮ ಮದ್ದು ಎನಿಸಿದೆ. ನಾವೀಗ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದೇವೆ. ಈಗ ದೇಶದ 75 ವಿವಿಧ ನಗರಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಯೋಗದಿನ ನಡೆಯುತ್ತಿದೆ. ಇವು ಭಾರತದ ಇತಿಹಾಸ ಮತ್ತು ಸಾಂಸ್ಕೃತಿಕ ಔನ್ನತ್ಯಕ್ಕೆ ಸಾಕ್ಷಿಯಾಗಿವೆ ಎಂದು ಹೇಳಿದರು.

Share Post