ರಾಮಲಲ್ಲಾ ಮೂರ್ತಿಗೆ ಕಲ್ಲು ಸಿಕ್ಕ ಜಾಗದಲ್ಲಿ ಗಲಾಟೆ
ಮೈಸೂರು: ರಾಮಲಲ್ಲಾ ಮೂರ್ತಿ ಕೆತ್ತನೆಗಾಗಿ ಸಿಕ್ಕ ಕಲ್ಲಿನ ಜಾಗದಲ್ಲಿ ರಾಮ ಮಂದಿರ ಕಟ್ಟಲು ತೀರ್ಮಾನಿಸಲಾಗಿದೆ. ಆದ್ರೆ ಇದು ರಾಜಕೀಯ ಬಣ್ಣ ಪಡೆದುಕೊಂಡಿದೆ.
ಇಂದು ಈ ಸ್ಥಳದಲ್ಲಿ ಭೂಮಿ ಪೂಜೆ ಆಯೋಜಿಸಲಾಗಿತ್ತು. ಈ ವೇಳೆ ಕೆಲವರು ಸಂಸದ ಪ್ರತಾಪ ಸಿಂಹ ಜೊತೆ ಗಲಾಟೆ ಮಾಡಿದ್ದಾರೆ.
ಹೆಚ್.ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಗಲಾಟೆಗೆ ಬಿಜೆಪಿ ಸಂಸದ ಪ್ರತಾಪ ಸಿಂಹ ಕಿಡಿ ಕಾರಿದ್ದಾರೆ. ನಾನು ಈ ಕ್ಷಣಕ್ಕೂ ಮಹಿಷಾ ದಸರಾ ವಿರೋಧಿಯಾಗಿದ್ದೇನೆ. ಹೀಗಾಗಿ ಕಾಂಗ್ರೆಸ್ನ ಪುಡಾರಿಗಳಿಂದ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಇನ್ನು, ಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ. ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಮಂದಿ ಇದ್ದಾರೆ. ನಾನು ಚಾಮುಂಡಿಯ ಭಕ್ತ. ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.