ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ: ಸಚಿವ ನಿರಾಣಿ
ಕೊಪ್ಪಳ; ಪಂಚಮಸಾಲಿ ಎರಡಲ್ಲ ಮೂರು ಪೀಠಗಳನ್ನು ಮಾಡಿದ್ದು ನಾನೇ. ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಅನ್ವಯವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಕೊಪ್ಪಳದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ಅವರು ಹೇಳಿದರು.
ಕೆಲವು ಸಣ್ಣ ವೈಮನಸ್ಸುಗಳು ಇರೋದರಿಂದ ವಿರೋಧಿಗಳು ನಮ್ಮನ್ನು ಪಂಚಮಸಾಲಿ ವಿರೊಧಿಗಳಂತೆ ಬಿಂಬಿಸುತ್ತಿದ್ದಾರೆ. ಸಮಸ್ತ ಲಿಂಗಾಯತ ಸಮುದಾಯಕ್ಕೆ ಈ ಮೀಸಲಾತಿ ಸಿಗಬೇಕು ಎನ್ನುವುದು ನನ್ನ ಉದ್ದೇಶ. ಕೇವಲ ಪಂಚಮಸಾಲಿಗೆ ಮಾತ್ರ ಬೇಡ ಎಂದಿರೋದಕ್ಕೆ ನನ್ನ ವಿರೋಧ ಮಾಡ್ತಾಯಿದ್ದಾರೆ. ಸಮಾಜಕ್ಕೆ ಆ ಇಬ್ಬರ ಕೊಡುಗೆ ಏನೂ, ನನ್ನ ಕೊಡುಗೆ ಏನು ಎನ್ನುವುದು ಜನರಿಗೆ ಗೊತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ಶಾಸಕ ಬಸಣ್ಣ ಗೌಡ ಯತ್ನಾಳ್, ಕಾಂಗ್ರೆಸ್ ನಾಯಕ ವಿಜಯಾನಂದ ಕಾಶಪ್ಪನವರ್ ವಿರುದ್ದ ಸಚಿವ ನಿರಾಣಿ ಅವರು ವಾಗ್ದಾಳಿ ನಡೆಸಿದರು.
ಎರಡು ಪೀಠಗಳನ್ನ ಒಂದು ಮಾಡಬೇಕು ಎಂದು ಪ್ರಯತ್ನ ಮಾಡಿದ್ದೆ ನಾನು, 100% ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ಸಿಗುತ್ತದೆ ಎಂದರು.