13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಜೈಲು
ಕೋಲಾರ; ಎರಡು ವರ್ಷದ ಹಿಂದೆ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಯುವಕನಿಗೆ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪೋಕ್ಸೊ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ತೋರ್ನಹಳ್ಳಿ ಗ್ರಾಮದ ಮಹೇಶ್ ಜೈಲು ಸೇರಿದ್ದಾನೆ.
ಕೋವಿಡ್ ಸಂದರ್ಭದಲ್ಲಿ ಹದಿಮೂರು ವರ್ಷದ ಬಾಲಕಿ ಮನೆಯಲ್ಲೇ ಇದ್ದಳು. ಈ ವೇಳೆ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಹೀಗಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಆಕೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೀಗ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು, 20 ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದರ ಜೊತೆಗೆ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಸೂಚನೆ ನೀಡಿದೆ.