HIJAB ISSUE: ಹುಬ್ಬಳ್ಳಿ-ಧಾರವಾಡದಲ್ಲಿ 144 ಸೆಕ್ಷನ್ ಜಾರಿ
ಹುಬ್ಬಳ್ಳಿ (HUBLI): ಹಿಜಾಬ್ ವಿವಾದ ರಾಜ್ಯದಲ್ಲಿ ಇನ್ನೂ ಮುಂದವರೆದಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಗತ್ಯವಿರುವ ಕಡೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅದೇ ರೀತಿಯ ಹುಬ್ಬಳ್ಳಿ ಹಾಗೂ ಧಾರವಾಡ ಅವಳಿ ನಗರದಲ್ಲೂ ನಿಷೇಧಾಜ್ಞೆ ಜಾರಿಯಲ್ಲಿದೆ.
ಹುಬ್ಬಳ್ಳಿ-ಧಾರವಾಡದಲ್ಲಿರುವ ಕಾಲೇಜುಗಳ ಸುತ್ತಮುತ್ತ 200 ಮೀಟರ್ವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಈ ಸ್ಥಳಗಳಲ್ಲಿ ಗುಂಪುಗೂಡುವುದು, ಘೋಷಣೆ ಕೂಗುವುದು ಇತ್ಯಾದಿಗಳನ್ನು ಮಾಡುವಂತಿಲ್ಲ. ಫೆಬ್ರವರಿ 28ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.