ಯುವತಿ ಅನುಮಾನಾಸ್ಪದ ಸಾವು; ಅತ್ಯಾಚಾರ ನಡೆಯಿತೇ..?
ಬೆಳಗಾವಿ; ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ 19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಬೈಲಹೊಂಗಲದ ತಬಸ್ಸುಮ್ ಸವದತ್ತಿ ಮೃತ ಯುವತಿ. ಈಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ತಬಸ್ಸುಮ್ ಸವದತ್ತಿ ಅವರು ಬೆಂಗಳೂರಿನ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ ನಿನ್ನೆ ಅಪರಿಚಿತ ವ್ಯಕ್ತಿಯೊಬ್ಬ ತಬಸ್ಸುಮ್‌ರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸೇರಿಸಿ ಪರಾರಿಯಾಗಿದ್ದಾರೆ. ಹೀಗಾಗಿ ಇದು ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.