CrimeDistricts

ಮುತಾಲಿಕ್‌ ಹತ್ಯೆ ಮಾಡಿದರೆ 20 ಲಕ್ಷ ಬಹುಮಾನ; ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಉಡುಪಿ; ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹಾಗೂ ಬಿಜೆಪಿ ಮುಖಂಡ ಯಶ್‌ ಪಾಲ್‌ ಸುವರ್ಣರ ತಲೆ ಕಡಿದರೆ 20 ಲಕ್ಷ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಬೆದರಿಕೆ ಹಾಕಲಾಗಿದೆ. ಈ ಪೋಸ್ಟ್‌ ಈಗ ಎಲ್ಲಡೆ  ವೈರಲ್‌ ಆಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗಂತ ಹಂದಿಗೆ ಹೋಲಿಕೆ ಮಾಡಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ. ಮಾರಿಗುಡಿ ಎಂಬ ಪೇಜ್‌ನಲ್ಲಿ ಹಂಡ್ರೆಡ್‌ ಪರ್ಸೆಂಟ್‌ ಈ ಎರಡು ತಲೆ ಉರುಳೋದು ಖಚಿತ ಎಂದು ಧಮ್ಕಿ ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ಕಾಪು ಬಿಜೆಪಿ ಯುವ ಮೋರ್ಚಾ ಲಿಖಿತ ರೂಪದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ಗಮನಕ್ಕೆ ತಂದಿದೆ. ಪೊಲೀಸರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Share Post