Districts

ಹಾಸ್ಟೆಲ್‌ ಊಟ ಸೇವಿಸಿ 27 ವಿದ್ಯಾರ್ಥಿನಿಯರು ಅಸ್ವಸ್ಥ

ಶಿವಮೊಗ್ಗ: ಇಲ್ಲಿನ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್​ನಲ್ಲಿ ಊಟ ಸೇವಿಸಿದ್ದ 27 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕಳೆದ ರಾತ್ರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಊಟ ಸೇವಿಸಿದ್ದರು. ಅನಂತರ ಕೆಲ ಹೊತ್ತಿನಲ್ಲೇ ಎಲ್ಲರಿಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೆಲವರಿಗೆ ವಾಂತಿಯೂ ಆಗಿದೆ.

ಕೂಡಲೇ ಎಲ್ಲಾ ವಿದ್ಯಾರ್ಥಿನಿಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

 

 

Share Post