Districts

ಹಲ್ಲಿಬಿದ್ದಿದ್ದ ಊಟ ಸೇವಿಸಿದ 34ಮಕ್ಕಳು ಅಸ್ವಸ್ಥ: ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದ ವೈದ್ಯರು

ಹಾಸನ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿಬಿದ್ದ ಊಟ ಸೇವಿಸಿ 34 ಮಕ್ಕಳು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ನಾರಾಯಣಗಟ್ಟಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ಊಟ ಸೇವಿಸಿದ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಭಯಪಡುವ ಅಗತ್ಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಶಾಲೆಯಲ್ಲಿ ಇಂದು ಮಧ್ಯಾಹ್ನ ಬಡಿಸಿದ ಬಿಸಿಯೂಟದಲ್ಲಿ ಅಚಾನಕ್ಕಾಗಿ ಹಲ್ಲಿ ಬಿದ್ದಿದೆ. ಇದು ಓರ್ವ ವಿದ್ಯಾರ್ಥಿ ತಟ್ಟೆಯಲ್ಲಿ ಕಾಣಿಸಿಕೊಂಡಿದೆ. ಕೂಡಲೇ ವಿದ್ಯಾರ್ಥಿ ವಿಷಯವನ್ನು ಶಿಕ್ಷಕರಿಗೆ ತಿಳಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಹಲವು ವಿದ್ಯಾರ್ಥಿಗಳು ಊಟ ಸೇವಿಸಿದ್ರು. ಉಳಿದವರು ಊಟ ಮಾಡದಂತೆ ತಡೆದಿದ್ದಾರೆ. ಕೂಡಲೇ ಊಟ ಸೇವಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅದರಲ್ಲಿ 34ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ರು. ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಬಿಜೆಪಿ ನಾಯಕ, ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ. ನಂತರ ಘಟನೆ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ಶಾಸಕ ಶಿವಲಿಂಗೇಗೌಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಧೈರ್ಯ ಹೇಳಿದ್ರು. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿರೋ ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಿರುವ ಅಚಾತುರ್ಯದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Share Post