DistrictsPolitics

4-6 ಶಾಸಕರಿಗೆ ಟಿಕೆಟ್‌ ಕೈತಪ್ಪಬಹುದು; ಮಾಜಿ ಸಿಎಂ ಬಿಎಸ್‌ವೈ

ಕಲಬುರಗಿ; ಬಿಜೆಪಿಯ ನಾಲ್ಕರಿಂದ ಆರು ಶಾಸಕರಿಗೆ ಈ ಬಾರಿ ಟಿಕೆಟ್‌ ಕೈತಪ್ಪಬಹುದು. ಉಳಿದೆಲ್ಲಾ ಹಾಲಿ ಶಾಸಕರಿಗೆ ಟಿಕೆಟ್‌ ಸಿಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ಸಿಗಲಿದೆ ಎಂದು ಹೇಳಿದರು.

ಇನ್ನು ವಿಜಯೇಂದ್ರ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಬಹುತೇಕ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡಬಹುದು ಎಂದು ಹೇಳಿದ್ದರು. ಬಿಜೆಪಿಗೆ ಯಾರೇ ಬರಲಿ ಅವರನ್ನು ನಾವು ಸ್ವಾಗತ ಮಾಡುತ್ತೇವೆ ಎಂದ ಬಿಎಸ್‌ವೈ, ಖರ್ಗೆ ಅವರು ಮೋದಿ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Share Post