ಪಳವಳ್ಳಿ ಬಸ್ ದುರಂತದಲ್ಲಿ ಮೃತಪಟ್ಟವರಿಗೆ 5ಲಕ್ಷ ಪರಿಹಾರ ಘೋಷಣೆ-ಶ್ರೀರಾಮುಲು
ಪಾವಗಡ: ತುಮಕೂರಿನ ಪಾವಗಡ ತಾಲೂಕಿನ ಪಳವಳ್ಳಿ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿದ್ರು. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ರು. ಗಾಯಾಳುಗಳನ್ನು ಪಾವಗಡ, ತುಮಕೂರು ಆಸ್ಪತ್ರೆಗಳಿಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇದೀಗ ಮೃತರಿಗೆ ಹಾಗೂ ಗಾಯಗೊಂಡವರಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ತಲಾ 5ಲಕ್ಷ ಪರಿಹಾರ ಘೋಷಣೆ ಮಾಡಿರುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ 50ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದರೊದಿಗೆ ವೈಯಕ್ತಿಕವಾಗಿ ಮೃತರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಒಂದು ಲಕ್ಷ ಪರಿಹಾರ ಕೊಡುವುದಾಗಿ ಪಳವಳ್ಳಿ ಕಟ್ಟೆ ಬಳಿ ಪರಿಶೀಲನೆ ನಡೆಸಿ ಶ್ರೀರಾಮುಲು ತಿಳಿಸಿದ್ದಾರೆ.
ಇನ್ನೂ ಘಟನಾ ಸ್ಥಳಕ್ಕೆ ಪಳವಳ್ಳಿ ಕಟ್ಟೆ ಬಳಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುತ್ತೇವೆ ಜೊತೆಗೆ ಮೃತರ ಮನೆಗಳಿಗೆ ತೆರಳಿ ಸಾಂತ್ವನ ಹೇಳುತ್ತೇನೆ. ಸಿಎಂ ಕರೆ ಮಾಡಿ ಪರಿಹಾರ ನೀಡುವ ಬಗ್ಗೆ ಮಾತನಾಡಿದ್ದಾರೆ. ಶೀಘ್ರದಲ್ಲೇ ಹಣ ಬಿಡುಗಡೆ ಮಾಡಲಾಗುವುದು ಎಂದರು.