ವಿಮ್ಸ್‌ನಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆ; ಅಷ್ಟಕ್ಕೂ ನಡೆದಿದ್ದೇನು..?
ಬಳ್ಳಾರಿ; ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಸರಣಿ ಮುಂದುವರಿದಿದೆ. ಇತ್ತೀಚೆಗೆ ವೆಂಟಿಲೇಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದರು. ವಿದ್ಯುತ್ ವ್ಯತ್ಯಯದಿಂದ ಈ ದುರ್ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿ ಮಾಡಿದ್ದರು. ಇದು ಹೀಗಿರುವಾಗಲೇ ವಿಮ್ಸ್‌ನಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ICU) ದಾಖಲಾಗಿದ್ದ 8 ವರ್ಷದ ಬಾಲಕ ನಿಖಿಲ್ ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಸೆಪ್ಟೆಂಬರ್ 11 ರಂದು ನಿಖಿಲ್‍ನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವುಗಳ ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆ ವೇಳೆಗೆ ಬಹಿರಂಗವಾಗಿದೆ.