CrimeDistricts

ಉಡುಪಿಯಲ್ಲಿ 9 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ!

ಉಡುಪಿ; ಕೆಲ ದಿನಗಳಿಂದ ಬೆಂಗಳೂರು ಪೊಲೀಸರು ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಬೆನ್ನುಬಿದ್ದಿದ್ದಾರೆ.. ಈಗಾಗಲೇ 20ಕ್ಕೂ ಹೆಚ್ಚು ಮಂದಿಯನ್ನು ವಿವಿಧ ಕಡೆ ಬಂಧಿಸಿದ್ದಾರೆ.. ಇದೀಗ ಬಾಂಗ್ಲಾದೇಶಿ ಪ್ರಜೆಗಳನ್ನು ಕೂಡಾ ಬಂಧಿಸಲಾಗಿದೆ.. ಉಡುಪಿಯ ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದರು.. ಅವರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ..
ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.. ಇವರೆಲ್ಲಾ ಮೀನುಗಾರರಾಗಿ ಕೆಲಸ ಅರಸಿ ಇಲ್ಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮಹಮದ್‌ ಮಾಣಿಕ್‌ ಎಂಬ ವ್ಯಕ್ತಿ ಮಂಗಳೂರಿನ ವಿಮಾನ ನಿಲ್ದಾಣದಿಂದ ದುಬೈಗೆ ಹೋಗೋದಕ್ಕೆ ಪ್ಲ್ಯಾನ್‌ ಮಾಡಿದ್ದ ಎಂದು ತಿಳಿದುಬಂದಿದೆ.. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತ ಬಾಂಗ್ಲಾದೇಶಿ ವಲಸಿಗರು ಎಂದು ತಿಳಿದುಬಂದಿದೆ..

Share Post