CrimeDistricts

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಮೈಸೂರು; ನಂಜನಗೂಡು ರಿಂಗ್‌ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಬೈಕ್‌ ಸವಾರರಿಗೆ ಗಂಭೀರ ಗಾಯಗಳಾಗಿವೆ. ಹೆಲ್ಮೆಟ್‌ ಧರಿಸದ ಕಾರಣದಿಂದ ತಲೆಗೆ ಗಂಭೀರವಾದ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯರ ಸಮಯಪ್ರಜ್ಞೆಯಿಂದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬರು ಇಬ್ಬರನ್ನೂ ಆಟೋದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆತಿದ್ದರಿಂದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share Post