CrimeDistrictsPolitics

ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರ ವಾಕ್ಸಮರ; 10 ಮಂದಿ ವಿರುದ್ಧ ಎಫ್‌ಐಆರ್‌

ತುಮಕೂರು; ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಇಬ್ಬರು ಮುಖಂಡರ ಬೆಂಬಲಿಗರ ವಾಕ್ಸಮರ ತಾರಕಕ್ಕೇರಿದೆ. ಸಾಮಾಜಿಕ ಜಾಲತಣದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಹಾಲಿ ಶಾಸಕ ಗುಬ್ಬಿ ಶ್ರೀನಿವಾಸ್‌ ಬೆಂಬಲಿಗರು ವಾಕ್ಸಮರ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಜೆಡಿಎಸ್‌ ಶಾಸಕ ಗುಬ್ಬಿ ಶ್ರೀನಿವಾಸ್‌ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾಗಿದೆ. ಇನ್ನು ಗುಬ್ಬಿ ಶ್ರೀನಿವಾಸ್‌ ಕಾಂಗ್ರೆಸ್‌ ಸೇರಲು ಸಿದ್ಧತೆ ನಡೆಸಿದ್ದಾರೆ. ಹೀಗಿರುವಾಗಲೇ ಗುಬ್ಬಿಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಶಾಸಕ ಶ್ರೀನಿವಾಸ್‌ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಟ ಶುರು ಮಾಡಿದ್ದಾರೆ. ಇದ್ರಿಂದಾಗಿ ಶಾಸಕ ಶ್ರೀನಿವಾಸ್‌ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಹತ್ತು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

Share Post