DistrictsPolitics

ಮತಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬಳ್ಳಾರಿ; ಮತದಾನ ಮಾಡಲು ಬಂದಿದ್ದ ತುಂಬು ಗರ್ಭಿಣಿಯೊಬ್ಬರು ಮತಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಕುರುಗೋಡು ತಾಲ್ಲೂಕಿನ ಕೊರ್ಲಾಗುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದರು. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಲಾಗಿದ್ದು, ಸ್ವಲ್ಪ ಸಮಯದಲ್ಲೇ ಆ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಇಬ್ಬರನ್ನೂ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Share Post