CrimeDistricts

ಯುಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದ ಯುವತಿ ಆತ್ಮಹತ್ಯೆ

ತುಮಕೂರು; ಯುಪಿಎಸ್ಸಿ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿದ್ದ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತುಮಕೂರು ನಗರದ ಭನಶಂಕರಿ 2ನೇ ಹಂತದ ಶಾಂತಿನಗರದಲ್ಲಿ ವಾಸವಿದ್ದ ಮಧುಶ್ರೀ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ .ಇತ್ತೀಚೆಗೆ ಪದವಿ ಮುಗಿಸಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿದ್ದರು.

ಮನೆಯಲ್ಲಿ ಯಾರು ಇಲ್ಲದ ವೇಳೆ ಮಂಗಳವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದು ಹೊರ ಹೋಗಿದ್ದ ಕುಟುಂಬಸ್ಥರು ಮನೆಗೆ ಆಗಮಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share Post