CrimeDistricts

KSRTC ಬಸ್ ಮತ್ತು ಲಾರಿ ನಡುವೆ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ; ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಕೊಳಾಳ್ ಬಳಿ ಮುಂಜಾನೆ ನಸುಕಿನಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ‌.ಗಾಯಾಳುಗಳನ್ನ ಆ್ಯಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಮುಂಜಾನೆ ನಸುಕಿನ ಜಾವ ಘಟನೆ ನಡೆದಿದ್ದು ಘಟನೆಯಲ್ಲಿ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Share Post