CrimeDistricts

ಟೆಂಪೋಗೆ ಐರಾವತ ಬಸ್‌ ಡಿಕ್ಕಿ; ಮುಂದೇನಾಯ್ತು..?

ಭಟ್ಕಳ; ಭಟ್ಕಳ ತಾಲ್ಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ಟೆಂಪೋ-ಐರಾವತ ಬಸ್‌ ನಡುವೆ ಅಪಘಾತ ಸಂಭವಿಸಿದೆ. ಬಸ್​ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

     ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share Post