DistrictsHealth

ಗದಗದಲ್ಲಿ ಮತ್ತೊಂದು ದುರ್ಘಟನೆ; ಅಪಘಾತದಲ್ಲಿ ಯಶ್ ಅಭಿಮಾನಿ ಸಾವು

ಗದಗ; ಕಳೆದ ರಾತ್ರಿ ನಟ ಯಶ್ ಹುಟ್ಟುಹಬ್ಬದ ಫ್ಲೆಕ್ಸ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೊಂದು ದುರ್ಘಟನೆ ನಡೆದಿದ್ದು, ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ನಟ ಯಶ್ ಗ್ರಾಮಕ್ಕೆ ಬಂದಿದ್ದರು. ಅನಂತರ  ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ಸ್ಕೂಟರ್ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಕೊನೆಯುಸಿರೆಳೆದಿದ್ದಾನೆ.

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ. ಗದಗ ಮುಳುಗುಂದ ರಸ್ತೆಯಲ್ಲಿ ಯಶ್  ಪೊಲೀಸ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಸದ್ಯ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Share Post