DistrictsPolitics

ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುತ್ತೇವೆ; ಡಿ.ಕೆ.ಶಿವಕುಮಾರ್‌

ರಾಮನಗರ; ಹೆಚ್‌.ಡಿ.ಕುಮಾರಸ್ವಾಮಿಯವರು ಮೊದಲ ಬಾರಿ ಸಿಎಂ ಆಗಿದ್ದಾಗ ರಾಮನಗರ ಹಾಗೂ ಚಿಕ್ಕಬಳ್ಳಾಪುರಗಳನ್ನು ಜಿಲ್ಲೆಗಳನ್ನಾಗಿ ಮಾಡಿದ್ದರು. ಇದೀಗ ರಾಮನಗರ ಜಿಲ್ಲೆಯನ್ನು ತೆಗೆಯುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೇಳಿದ್ದಾರೆ.

ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ, ಬದಲಾಗಿ ನಾವೆಲ್ಲಾ ಬೆಂಗಳೂರು ಜಿಲ್ಲೆಯವರಾಗುತ್ತೇವೆ. ಮತ್ತೆ ರಾಮನಗರವನ್ನು ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಯಾರೋ ಹೆಸರು ಮಾಡಿಕೊಳ್ಳಲು ರಾಮನಗರ ಜಿಲ್ಲೆ ರಚನೆ ಮಾಡಿದ್ದರು. ನಮ್ಮನ್ನು ರಾಮನಗರ ಜಿಲ್ಲೆ ಅಂತಾ ಮೂಲೆಗೆ ತಳ್ಳಬೇಡಿ. ಕನಕಪುರದವರು ಬೆಂಗಳೂರು ಜಿಲ್ಲೆಯವರು ಎಂದು ಹೆಚ್.ಡಿ ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್‌ ಇದೇ ವೇಳೆ ಟಾಂಗ್ ನೀಡಿದ್ದಾರೆ.

ವಿಜಯದಶಮಿ ದಿನ ಹೇಳುತ್ತಿದ್ದೇನೆ, ಕನಕಪುರ ಬೆಂಗಳೂರು ಜಿಲ್ಲೆಗೆ ಸೇರುತ್ತದೆ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು, ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡಲಾಗುತ್ತದೆ ಎಂದರು.

ಯಾವ ರೈತರೂ ಯಾವುದೇ ಕಾರಣಕ್ಕೂ ತಮ್ಮ ಭೂಮಿಯನ್ನು ಮಾರಾಟ ಮಾಡಬೇಡಿ. ಯಾಕಂದ್ರೆ ಇಲ್ಲಿನ ಭೂಮಿಗೆ ಅಡಿ ಲೆಕ್ಕದಲ್ಲಿ ಬೆಲೆ ಹೆಚ್ಚಾಗುತ್ತದೆ. ಹೀಗಾಗಿ ಯಾರೂ ಭೂಮಿ ಮಾರಬೇಡಿ ಎಂದು ಡಿ.ಕೆ.ಶಿವಕುಮಾರ್‌ ರಾಮನಗರದ ರೈತರಲ್ಲಿ ಮನವಿ ಮಾಡಿದ್ದಾರೆ.

 

Share Post