CrimeDistrictsPolitics

ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಪ್ರಕರಣ; ಪೊಲೀಸರಿಗೆ ದೂರು

ಮಂಡ್ಯ; ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಏಳು ಸಹಾಯಕ ಕೃಷಿ ನಿರ್ದೇಶಕರುಗಳು ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕೃಷಿ ನಿರ್ದೇಶಕರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆಂದು ವರದಿಯಾಗಿತ್ತು. ಆದ್ರೆ, ಇದು ನಕಲಿ ಅರ್ಜಿ, ಯಾವ ಅಧಿಕಾರಿಯೂ ದೂರು ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಂಡ್ಯ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್‌ ಅವರು ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಕೊಟ್ಟಿದ್ದಾರೆ. ಪತ್ರದ ಸತ್ಯಾಸತ್ಯತೆಯ ಬಗ್ಗೆ ತನಿಖೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಕೃಷಿ ಸಚಿವರ ಸೂಚನೆ ಮೇರೆಗೆ ಕೃಷಿ ನಿರ್ದೇಶಕರು ನಮಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಏಳು ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರ ಸಹಿ ಇರುವ ಪತ್ರ ವೈರಲ್‌ ಆಗಿತ್ತು. ಈ ವಿಚಾರ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳ ಈ ಬಗ್ಗೆ ಆಕ್ರೋಶಗಳು ವ್ಯಕ್ತಪಡಿಸುತ್ತಿವೆ. ಈ ಬೆನ್ನಲ್ಲೇ ಅಧಿಕಾರಿಗಳು ಬೇರೆಯದೇ ರೀತಿಯಲ್ಲಿ ಹೇಳುತ್ತಿದ್ದಾರೆ.

ಜಂಟಿ ಕೃಷಿ ನಿರ್ದೇಶಕರು ಈ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದು, ಅವರು ನಾವು ದೂರನ್ನು ರಾಜ್ಯಪಾಲರಿಗೆ ನೀಡಿಲ್ಲ. ಕೃಷಿ ಸಚಿವರು ನಮ್ಮ ಬಳಿ ಯಾವುದೇ ಹಣಕ್ಕೆ ಬೇಡಿಕೆ ಇಟ್ಟಿಲ್ಲ ಎಂದೂ ಹೇಳಿದ್ದಾರಂತೆ. ಜೊತೆಗೆ ದೂರಿನಲ್ಲಿರುವ ಸಹಿಗಳು ಕೂಡಾ ನಮ್ಮದಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ.

 

Share Post