DistrictsPolitics

ಪಕ್ಷದ ಸಿದ್ಧಾಂತ ಒಪ್ಪಿ ಬರುವ ಎಲ್ಲರಿಗೂ ಸ್ವಾಗತ; ಡಿ.ಕೆ.ಶಿವಕುಮಾರ್‌

ತುಮಕೂರು; ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿರುವವರು ಕಾಂಗ್ರೆಸ್‌ಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಹ್ವಾನ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್‌ಗೆ ಹೆಚ್ಚಿನ ಬಹುಮತ ಬರುವುದಕ್ಕಾಗಿ ಎಲ್ಲರೂ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು ಎಂದು ಹೇಳಿದರು.

ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ. ಸ್ಥಳೀಯವಾಗಿ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬರಬೇಕು ಎಂದು ಆಹ್ವಾನ ನೀಡಿದರು. ಜಗದೀಶ್‌ ಶೆಟ್ಟರ್‌ ಹಾಗೂ ಸವದಿಯವರು ಕಾಂಗ್ರೆಸ್‌ಗೆ ಬಂದಿರುವುದರಿಂದ ವೀರಶೈವರ ಹೆಚ್ಚಿನ ಮತಗಳು ಕಾಂಗ್ರೆಸ್‌ಗೆ ಲಭ್ಯವಾಗಲಿವೆ ಎಂಬ ವಿಶ್ವಾಸವನ್ನು ಡಿ.ಕೆ.ಶಿವಕುಮಾರ್‌ ವ್ಯಕ್ತಪಡಿಸಿದರು.

Share Post