DistrictsPolitics

ಕಾಂಗ್ರೆಸ್‌ನತ್ತ ಮತ್ತೊಬ್ಬ ಬಿಜೆಪಿ ಶಾಸಕ; ಕಾಂಗ್ರೆಸ್‌ ಕದ ತಟ್ಟಿದ ಎನ್‌.ವೈ.ಗೋಪಾಲಕೃಷ್ಣ

ಬಳ್ಳಾರಿ; ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ವಿವಿಧ ಪಕ್ಷಗಳಿಂದ ಕಾಂಗ್ರೆಸ್‌ಗೆ ವಲಸೆ ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ಕೂಡಾ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ನಿನ್ನೆ ಗೋಪಾಲಕೃಷ್ಣ ಅವರು ಕಾಂಗ್ರೆಸ್‌ ಸ್ಕ್ರೀನಿಂಗ್‌ ಸಮಿತಿ ಸಭೆ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜೊತೆ ಮಾತುಕತೆ ನಡೆಸಿದ್ದಾರೆ.

ಗೋಪಾಲಕೃಷ್ಣ ಅವರು ಈ ಬಾರಿ ಮೊಳಕಾಲ್ಮೂರು ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ನಿಂದ ಗೋಪಾಲಕೃಷ್ಣ ಅವರಿಗೆ ಟಿಕೆಟ್‌ ನೀಡುವ ಭರವಸೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರು ಶೀಘ್ರದಲ್ಲೇ ಕಾಂಗ್ರೆಸ್‌ ಸೇರುತ್ತಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹಾಗೂ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಕೂಡಾ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಶೀಘ್ರದಲ್ಲೇ ಕಾಂಗ್ರೆಸ್‌ ಸೇರಲಿದಾರೆ ಎಂದು ತಿಳಿದುಬಂದಿದೆ.

Share Post