Districts

ಶೀಘ್ರದಲ್ಲೇ ಈಶ್ವರಪ್ಪ ರಾಜೀನಾಮೆ ಬಗ್ಗೆ ತೀರ್ಮಾನಿಸುತ್ತೇವೆ; ಅರುಣ್‌ ಸಿಂಗ್‌

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನಡೆದಿರುವುದು ಸಣ್ಣ ಘಟನೆಯಲ್ಲ. ಇದರ ಹಿಂದೆ ಖಂಡಿತವಾಗಿಯೂ ದೊಡ್ಡ ಕೈವಾಡವಿದೆ. ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ್‌ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಮಾಹಿತಿ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಹಲವು ಅಯಾಮಗಳಿವೆ. ಘಟನೆಯ ಹಿಂದೆ ಯಾರಾರಿದ್ದಾರೆ ಎನ್ನುವುದನ್ನು ತನಿಖೆ ನಡೆಸಬೇಕಾಗುತ್ತದೆ. ಇದನ್ನು ಸಣ್ಣ ಘಟನೆ ಎಂದು ಪರಿಗಣಿಸಬಾರದು‌. ಇದು ಗಂಭೀರವಾದ ವಿಷಯವಾಗಿದೆ.‌ ಶೀಘ್ರದಲ್ಲೇ ಒಂದು‌ ನಿರ್ಣಯಕ್ಕೆ ಬರಲಾಗುವುದು ಎಂದರು.

Share Post