DistrictsNational

ನಾನು ಹಿಂದೂ ಆಗಿ ಸತೀಶ್‌ ಹೇಳಿಕೆ ಒಪ್ಪಲ್ಲ; ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ; ನಾನೊಬ್ಬ ಹಿಂದೂವಾಗಿ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ, ಕಾಂಗ್ರೆಸ್‌ ಪಕ್ಷ ಇಂತಹ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮಕ್ಕೆ ದೊಡ್ಡ ಇತಿಹಾಸವಿದೆ. ಹೀಗಾಗಿ ಆ ಬಗ್ಗೆ ಯಾರೂ ಮಾತನಾಡಬಾರದು. ಸತೀಶ್ ಜಾರಕಿಹೊಳಿ ಹೇಳಿಕೆ ಸ್ಪಷ್ಟನೆ ಕೇಳುತ್ತೇವೆ. ಅವರ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದಿಲ್ಲ ಎಂದು ಸ್ಪಷ್ಟಪಡಿಸಿದರು.

Share Post