DistrictsPolitics

140 ಸ್ಥಾನ ಗೆಲ್ಲುಸುವುದು ನನ್ನ ಗುರಿ; ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ; ಹೈಕಮಾಂಡ್‌ ನನಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಕೊಟ್ಟಿದೆ. ಹೀಗಾಗಿ ನಾನು ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವಂತೆ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

  ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನಿನ್ನೆ ಮಂಗಳೂರಿನಲ್ಲಿ 140 ಸ್ಥಾನ ಗೆಲ್ಲಬೇಕು ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲಾ ನಾಯಕರನ್ನೂ ಒಗ್ಗೂಡಿಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರಚಾರಕ್ಕೆ ಮೋದಿಯವರೂ ಬರುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ಎಲ್ಲರೂ ಒಪ್ಪಿದಲ್ಲಿ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗುವುದು ಎಂದು ಬಿಎಸ್‌ವೈ ಇದೇ ವೇಳೆ ಹೇಳಿದರು.

Share Post