Districts

ಬೆಂಗಳೂರು-ಮೈಸೂರು ದಶಪಥ ರಸ್ತೆ; ಆಗಸ್ಟ್‌ 15ಕ್ಕೆ ಭಾಗಶಃ ಮುಕ್ತ

ರಾಮನಗರ; ಬೆಂಗಳೂರು–ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭಾಗಶಃ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನದಂದು ಭಾಗಶಃ ಸಂಚಾರಕ್ಕೆ ಮುಕ್ತವಾಗಲಿದೆ. ಈ ಬಗ್ಗೆ ನಿನ್ನೆ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಈ ಮಾಹಿತಿ ನೀಡಿದ್ದಾರೆ.

ನಿಡಘಟ್ಟದಿಂದ ಬೆಂಗಳೂರಿನ ಕ್ರೈಸ್ಟ್‌ ಕಾಲೇಜುವರೆಗಿನ ಸುಮಾರು 51 ಕಿ.ಮೀ. ಉದ್ದದ ಹೆದ್ದಾರಿಯ ಒಂದು ಬದಿಯನ್ನು ಆಗಸ್ಟ್‌ 15 ರಂದು ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ. ಸೆಪ್ಟೆಂಬರ್ 2ನೇ ವಾರದೊಳಗೆ ಇನ್ನೊಂದು ಬದಿಯ ಸಂಚಾರಕ್ಕೂ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್‌ 15ರ ಒಳಗೆ ಬೆಂಗಳೂರಿನ ಮೊದಲ ನಾಲ್ಕು ಕಿ.ಮೀ. ಹೆದ್ದಾರಿ ಕಾಮಗಾರಿ ಹೊರತುಪಡಿಸಿ ಉಳಿದ 51 ಕಿ.ಮೀ. ಹೆದ್ದಾರಿಯೂ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ತಿಳಿದುಬಂದಿದೆ. ಮೊದಲಿಗೆ ಆರು ಪಥಗಳ ಎಕ್ಸ್‌ಪ್ರೆಸ್‌ ಹೈವೆ ಹಾಗೂ ನಂತರದಲ್ಲಿ ಸರ್ವೀಸ್ ರಸ್ತೆಗಳು ಪ್ರಯಾಣಿಕರಿಗೆ ಮುಕ್ತವಾಗಲಿವೆ.

Share Post