CrimeDistricts

ಭದ್ರಾವತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ; ಶಿವಮೊಗ್ಗ ಜಿಲ್ಲೆಯಲ್ಲಿ ಯವಕನೊಬ್ಬನ ಭೀಕರ ಹತ್ಯೆ ನಡೆದಿದೆ. ಭದ್ರಾವತಿ ಪಟ್ಟಣದಲ್ಲಿ ಸೈಯದ್‌ ರಜಿಖ್‌ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದ್ದು, ಕೊಲೆಯ ನಂತರ ದುಷ್ಕರ್ಮಿಗಳು ಎಸ್ಕೇಪ್‌ ಆಗಿದ್ದಾರೆ.

ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Share Post