ಕಾಂಗ್ರೆಸ್ ಮುಖಂಡೆಯ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ; ದೂರು ದಾಖಲು
ಬೆಳಗಾವಿ; ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಮಹಿಳಾ ಕಾಂಗ್ರೆಸ್ ಮುಖಂಡರೊಬ್ಬರ ಮೇಲೆ ಬ್ಲ್ಯಾಕ್‌ಮೇಲ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ದೂರು ನೀಡಿರುವ ಅಧಿಕಾರಿ. ಚನ್ನಪಟ್ಟಣ ಮೂಲಕ ನವ್ಯಶ್ರೀ ರಾಮಚಂದ್ರರಾವ್ ಹಾಗೂ ಅವರ ಆಪ್ತ ತಿಲಕ್ ವಿರುದ್ಧ ತಡರಾತ್ರಿ ದೂರು ನೀಡಲಾಗಿದೆ. ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ. ಸುಳ್ಳುಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.