DistrictsNationalPolitics

ಹೇಳೋದಕ್ಕೆ ಮಾತ್ರ ಖರ್ಗೆ ಎಐಸಿಸಿ ಅಧ್ಯಕ್ಷ, ಆದ್ರೆ ರಿಮೋಟ್ ಅವರ ಕೈಲಿದೆ; ಪ್ರಧಾನಿ ಮೋದಿ

ಬೆಳಗಾವಿ; ನವ ಭಾರತ ನಿರ್ಮಾಣದಲ್ಲಿ ಬೆಳಗಾವಿಯ ಪಾತ್ರ ಸಾಕಷ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳಗಾವಿಯ ಅಭಿವೃದ್ಧಿಗೆ ಡಬಲ್‌ ಎಂಜಿನ್‌ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯ ಹಣವನ್ನು ಇಂದು ಬೆಳಗಾವಿಯಿಂದ ದೇಶದ 16 ಕೋಟಿ ರೈತರಿಗೆ ವರ್ಗಾಯಿಸಲಾಗಿದೆ. ಇಲ್ಲಿ ಸೇರಿರುವ ರೈತರ ಖಾತೆಗಳಿಗೂ ಹಣ ಈಗಾಗಲೇ ಜಮೆಯಾಗಿರಬಹುದು. ಮಧ್ಯವರ್ತಿಗಳ ಕಾಟವಿಲ್ಲದೆ ನೇರವಾಗಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು.

ದೇಶದ ಭವಿಷ್ಯದ ದೃಷ್ಟಿಯಿಂದಾಗಿ ಕೃಷಿಗೆ ನಾವು ಹೆಚ್ಚು ಒತ್ತು ನೀಡುತ್ತಿದ್ದೇವೆ. ಬೊಮ್ಮಾಯಿ ಸರ್ಕಾರ ಕೂಡಾ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕಾಗಿ ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮೀಸಲಿರಿಸಿದ್ದೇವೆ ಎಂದು ಮೋದಿ ಹೇಳಿದರು. ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನಿಂದ ರೈತರಿಗೆ ಅನುಕೂಲವಾಗಿದೆ ಎಂದು ಮೋದಿ, ಕೃಷಿಗೆ ಇನ್ನೂ ಹೆಚ್ಚು ಒತ್ತು ನೀಡುವುದಾಗಿ ಹೇಳಿದರು.

ಯಡಿಯೂರಪ್ಪಮ ಅವರನ್ನು ಇಲ್ಲೂ ಹಾಡಿಹೊಳಿದ ಮೋದಿಯವರು, ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನನಗೆ ಗೌರವವಿದೆ. ಅವರು ಎಐಸಿಸಿ ಅಧ್ಯಕ್ಷರು ನಿಜ, ಆದ್ರೆ ರಿಮೋಟ್‌ ಕಂಟ್ರೋಲ್‌ ಗಾಂಧಿ ಕುಟುಂಬದ ಬಳಿ ಇದೆ ಎಂದು ಮೋದಿ ಇದೇ ವೇಳೆ ಹೇಳಿದರು.

Share Post