ಬೆಳಗಾವಿಯನ್ನು ಎರಡಲ್ಲ, ಮೂರು ಜಿಲ್ಲೆಯಾಗಿ ವಿಭಜಿಸಬೇಕು; ಸತೀಶ್ ಜಾರಕಿಹೊಳಿ
ಬೆಳಗಾವಿ; ಕುಂದಾನಗರಿ ಬೆಳಗಾವಿ ರಾಜ್ಯದ ಅತಿದೊಡ್ಡ ಜಿಲ್ಲೆ. ಈ ಜಿಲ್ಲೆಯನ್ನು ವಿಭಜನೆ ಮಾಡಿ ಎರಡು ಜಿಲ್ಲೆ ಮಾಡಬೇಕೆಂಬ ಕೂಗು ಎಷ್ಟೋ ದಿನಗಳಿಂದ ಇದೆ. ಆದ್ರೆ, ಸಚಿವ ಸತೀಶ್ ಜಾರಕಿಹೊಳಿ ಇನ್ನೂ ಸ್ವಲ್ಪ ಮುಂದೆ ಹೋಗಿ ಎರಡು ಜಿಲ್ಲೆಯಲ್ಲ, ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಜಿಲ್ಲೆಗಳನ್ನಾಗಿ ಮಾಡಬೇಕು ಎಂದಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಹಾಗೂ ಗೋಕಾಕ್‌ಗಳನ್ನು ಜಿಲ್ಲೆಗಳನ್ನಾಗಿ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಅದರ ವಿಭಜನೆ ಆಗಲೇಬೇಕಿದೆ. ಅದನ್ನು ಮಾಡಿಯೇ ತೀರುತ್ತೇನೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಅದು ಯಾವಾ ಮಾಡುತ್ತಾರೋ ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.